Home ತಾಜಾ ಸುದ್ದಿ Siddapur : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ; ಜನಗಣತಿ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿ ಪೂರ್ಣಿಮಾ ಭಟ್ಟ ದುರ್ಮರಣ

    Siddapur : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ; ಜನಗಣತಿ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿ ಪೂರ್ಣಿಮಾ ಭಟ್ಟ ದುರ್ಮರಣ

    0
    50

    ಸಿದ್ದಾಪುರ :  ಶಿರಸಿ ಮುಖ್ಯ ರಸ್ತೆಯ ಮಳವತ್ತಿ ಸಮೀಪ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಈ ಡಿಕ್ಕಿಯಲ್ಲಿ ಪಟ್ಟಣದ ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಗಣಪತಿ ಭಟ್ಟ (47) ಅವರು ದಾರುಣವಾಗಿ ಮೃತಪಟ್ಟಿದ್ದಾರೆ. ಜನಗಣತಿ ಮಾಹಿತಿಯನ್ನು ಪಟ್ಟಣ ಪಂಚಾಯಿತಿಗೆ ಸಲ್ಲಿಸಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

    ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ ಅವರನ್ನು ತಕ್ಷಣವೇ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ರಕ್ತಸ್ರಾವ ಮತ್ತು ಗಂಭೀರ ಗಾಯಗಳಿಂದಾಗಿ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೃತ ಪೂರ್ಣಿಮಾ ಭಟ್ಟ ಅವರು ಪಟ್ಟಣದ ಕೋಲಸಿರ್ಸಿ ಕ್ರಾಸ್ ಸಮೀಪದ ಬಸವಗಿರಿ ನಿವಾಸಿಯಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಶಾಲಾ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಈ ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ರ್ಯಾಕ್ಟರ್ ಚಾಲಕನ ವಿರುದ್ಧ ತನಿಖೆ ಕೈಗೊಂಡಿದ್ದಾರೆ.

    ಇದನ್ನು ಓದಿ : NEET UG 2026 Re-exam Date : ಪೇಪರ್ ಲೀಕ್ ಬೆನ್ನಲ್ಲೇ ಮರುಪರೀಕ್ಷೆಯ ದಿನಾಂಕ ಅನೌನ್ಸ್ ; NTA ಮಹತ್ವದ ನಿರ್ಧಾರ!

    LEAVE A REPLY

    Please enter your comment!
    Please enter your name here

    error: Content is protected !!