Monday, May 11, 2026
Homeತಾಜಾ ಸುದ್ದಿSuvendu Adhikari oath ceremony : ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು...

Suvendu Adhikari oath ceremony : ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

ಕೋಲ್ಕತ್ತಾ : ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಶನಿವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದಂತಾಗಿದೆ. ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಗ್ರೌಂಡ್ಸ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ಅಧಿಕಾರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಎನ್‌ಡಿಎ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿಯ ಹಿರಿಯ ನಾಯಕರು ಸಾಕ್ಷಿಯಾದರು. ಬಂಗಾಳದ ರಾಜಕೀಯದಲ್ಲಿ ಈ ಬದಲಾವಣೆಯು ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ.

294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ ಅಭೂತಪೂರ್ವ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದೆ. ಈ ಗೆಲುವಿನೊಂದಿಗೆ ರಾಜ್ಯದಲ್ಲಿ ಸುಮಾರು 15 ವರ್ಷಗಳ ಕಾಲ ನಡೆದಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ತೆರೆ ಬಿದ್ದಿದೆ.

ಇದನ್ನು ಓದಿ :Kerala KSRTC gender ticketing : ಕೇರಳ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇಂದಿನಿಂದ ‘ಲಿಂಗಾಧಾರಿತ ಟಿಕೆಟ್’ ಜಾರಿ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!