ಉಡುಪಿ : ಸೇಡಂ ತಾಲೂಕಿನ ಎಂಜಿನಿಯರಿಂಗ್ ಪದವೀಧರ ಯುವಕನೊಬ್ಬ ಉಡುಪಿಯ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಡೆದಿದೆ.
ಮೃತ ಯುವಕನನ್ನು ಸೇಡಂ ಮೂಲದ ಅಜಯರಾಜ್ (29) ಎಂದು ಗುರುತಿಸಲಾಗಿದೆ.
ಮೃತ ಅಜಯರಾಜ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ ನಂತರ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅನಂತರ 2025ರಲ್ಲಿ ಆ ಕೆಲಸವನ್ನು ಬಿಟ್ಟು ಸ್ವಗ್ರಾಮಕ್ಕೆ ಮರಳಿದ್ದರು. ಇತ್ತೀಚೆಗೆ ಹೊಸ ಉದ್ಯೋಗಕ್ಕಾಗಿ ಉಡುಪಿಗೆ ಆಗಮಿಸಿದ್ದ ಅವರು, ಸ್ಥಳೀಯ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿಕೊಂಡು ಬನ್ನಂಜೆಯ ಪಿಜಿಯೊಂದರಲ್ಲಿ ತಂಗಿದ್ದರು.
ಉದ್ಯೋಗದ ಸಮಸ್ಯೆ ಅಥವಾ ಇನ್ಯಾವುದೋ ಕಾರಣಕ್ಕೆ ಮನನೊಂದು, ಜೀವನದಲ್ಲಿ ಜಿಗುಪ್ಸೆಗೊಂಡು ಅವರು ಈ ಕಠಿಣ ನಿರ್ಧಾರ ತಳೆದಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತ ಯುವಕನ ತಂದೆ ನೀಡಿದ ದೂರಿನನ್ವಯ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನು ಓದಿ : Kasaragod : ಪೊಲೀಸ್ ದಾಳಿ ವೇಳೆ ನದಿಗೆ ಜಿಗಿದಿದ್ದ ಯುವಕ ಶವವಾಗಿ ಪತ್ತೆ!