HomeLOCALUdupi : ರಕ್ತ ವಾಂತಿ ಮಾಡಿ ಬಸ್‌ಸ್ಟ್ಯಾಂಡ್‌ನಲ್ಲಿ ಬಿದ್ದಿದ್ದ ಯುವಕನ ರಕ್ಷಣೆ!

Udupi : ರಕ್ತ ವಾಂತಿ ಮಾಡಿ ಬಸ್‌ಸ್ಟ್ಯಾಂಡ್‌ನಲ್ಲಿ ಬಿದ್ದಿದ್ದ ಯುವಕನ ರಕ್ಷಣೆ!

Udupi : ಉಡುಪಿಯ ಚಿಟಪ್ಪಾಡಿ ಹನುಮಾನ್ ಗ್ಯಾರೇಜ್‌ನತ್ತ ತೆರಳುವ ರಸ್ತೆಯ ಬಸ್ ನಿಲ್ದಾಣದಲ್ಲಿ ರಕ್ತ ವಾಂತಿ ಮಾಡಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಯುವಕನೊಬ್ಬನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.

ಮೂಲತಃ ಬಾಗಲಕೋಟೆ ಮೂಲದ ಶಿವ (23) ಎಂಬ ಯುವಕ ಬಸ್ ನಿಲ್ದಾಣದಲ್ಲಿ ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದರು. ಈ ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ತಕ್ಷಣ ಸ್ಥಳಕ್ಕೆ ಆಗಮಿಸಿ ಯುವಕನನ್ನು ರಕ್ಷಿಸಿದ್ದಾರೆ.

ಬಳಿಕ ಗಂಭೀರ ಸ್ಥಿತಿಯಲ್ಲಿದ್ದ ಯುವಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಯುವಕನ ಕುಟುಂಬದ ಸದಸ್ಯರು ಯಾರಾದರೂ ಇದ್ದಲ್ಲಿ ತಕ್ಷಣ ಅಜ್ಜರಕಾಡು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

ಇದನ್ನು ಓದಿ : Bantwal : ಸಿದ್ದಕಟ್ಟೆಯಲ್ಲಿ ಯುವಕನಿಗೆ ಚಾಕುವಿನಿಂದ ಇರಿತ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments