ಉಪ್ಪಿನಂಗಡಿ : ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ಮೇ 9ರಂದು ರಸ್ತೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ರೋಡ್ ರೋಲರ್ ಅಡಿಗೆ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯ ಕೆಲಸ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವ್ಯಕ್ತಿಯೋರ್ವ ರಸ್ತೆ ಬದಿಯಲ್ಲಿ ಮಲಗಿದ್ದ ಎನ್ನಲಾಗಿದ್ದು, ಆತನ ಮೇಲೆ ರೋಡ್ ರೋಲರ್ ಚಲಿಸಿದೆ. ಅಪಘಾತದ ತೀವ್ರತೆಗೆ ಆತನ ದೇಹವು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಆತ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಮೃತಪಟ್ಟ ವ್ಯಕ್ತಿಯನ್ನು ಉತ್ತರ ಭಾರತ ಮೂಲದ ಕಾರ್ಮಿಕ ಎಂದು ಅಂದಾಜಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಿದೆ.
ಇದನ್ನು ಓದಿ : Moodbidri : ಕಾರಿಗೆ ಡಿಕ್ಕಿ ಹೊಡೆದ ಮಿನಿ ಬಸ್; ಪವಾಡಸದೃಶ ರೀತಿಯಲ್ಲಿ ಪಾರಾದ ಪ್ರಯಾಣಿಕರು

