Home ತಾಜಾ ಸುದ್ದಿ Yogish Goudar murder case : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಜನರಿಗೆ...

    Yogish Goudar murder case : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಜನರಿಗೆ ಜೀವಾವಧಿ ಶಿಕ್ಷೆ

    0
    40

    ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ಇತರ 16 ಮಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

    ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ತೀರ್ಪನ್ನು ನೀಡಿದ್ದಾರೆ. ಕಳೆದ ಬುಧವಾರವಷ್ಟೇ ನ್ಯಾಯಾಲಯವು ಎಲ್ಲಾ 17 ಆರೋಪಿಗಳನ್ನು ಗೌಡರ್ ಕೊಲೆಯಲ್ಲಿ ದೋಷಿಗಳೆಂದು ಘೋಷಿಸಿತ್ತು ಮತ್ತು ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು.

    ಇಂದು (ಶುಕ್ರವಾರ) ನ್ಯಾಯಾಲಯವು ಅಂತಿಮ ತೀರ್ಪು ಪ್ರಕಟಿಸಿದ್ದು, ಪ್ರಕರಣದಲ್ಲಿ ದೋಷಿತರಾದ ಎಲ್ಲಾ ವ್ಯಕ್ತಿಗಳಿಗೂ ಜೀವಾವಧಿ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.

    ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡರ್ ಅವರನ್ನು 2016ರಲ್ಲಿ ಕೊಲೆ ಮಾಡಲಾಗಿತ್ತು.

    LEAVE A REPLY

    Please enter your comment!
    Please enter your name here

    error: Content is protected !!